Crime 
ಹಾವೇರಿ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

ಶಿಗ್ಗಾಂವ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಎನ್ಎಚ್-48ರ ಬಳಿ ಜಮೀನುವೊಂದರಲ್ಲಿ ನಡೆದಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ರುದ್ರಪ್ಪ ವೀರಪ್ಪ ಅಳಗವಾಡಿ (78) ಮೃತ ರೈತ.

ಇವರು ಬ್ಯಾಂಕ್ನಲ್ಲಿ 2.40 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಕಳೆದ ನಾಲ್ಕು ವರ್ಷದಿಂದ ಬೆಳೆಹಾನಿಯಾಗಿ ನಷ್ಟ ಅನುಭವಿಸಿದ್ದರು. ಇದರಿಂದ ಬೇಸತ್ತು ಶಿಗ್ಗಾಂವ ಬಳಿ ಬಂದು ಜಮೀನುವೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.