ಏತ ನೀರಾವರಿ ಯೋಜನೆಗಳಿಗೆ (Lift irrigation) ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯಿಸಿ ರಟ್ಟಿಹಳ್ಳಿ ತಾಲೂಕಿನ ಚಟ್ನಳ್ಳಿ ಜಾಕ್ವೆಲ್ ಬಳಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದರು.
ರಟ್ಟಿಹಳ್ಳಿ: ಏತ ನೀರಾವರಿ ಯೋಜನೆಗಳಿಗೆ (Lift irrigation) ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯಿಸಿ ತಾಲೂಕಿನ ಚಟ್ನಳ್ಳಿ ಜಾಕ್ವೆಲ್ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಚಿವ ಬಿ.ಸಿ. ಪಾಟೀಲ ನೇತೃತ್ವದಲ್ಲಿ ಮಂಗಳವಾರ ಧರಣಿ ಸತ್ಯಾಗ್ರಹ ನಡೆಯಿತು.
ಬಿ.ವೈ. ವಿಜಯೇಂದ್ರ ಮಾತನಾಡಿ, ಕಳೆದ ಬಿಜೆಪಿ ಸರ್ಕಾರದ ಅವ-ಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಬಿ.ಎಸ್. ಯಡಿಯೂರಪ್ಪ, ಸಂಸದ ರಾವೇಂದ್ರ, ಮಾಜಿ ಸಚಿವ ಬಿ.ಸಿ. ಪಾಟೀಲ ಮತ್ತು ಈ ಭಾಗದ ರೈತರ ಸಹಕಾರದಿಂದ 850 ಕೋಟಿ ರೂಪಾಯಿ ವೆಚ್ಚದಲ್ಲಿ ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ ಮತ್ತು ಹೊಸೂರು ಹೋಬಳಿ ಶಾಶ್ವತ ಏತ ನೀರಾವರಿ ಯೋಜನೆ ಅನುಷ್ಠಾನ ಮಾಡಲಾಗಿದೆ. ಸುಮಾರು 800 ಕೆರೆಗೆ ನೀರು ತುಂಬಿಸುವ ಯೋಜನೆಗೆ ಅಧಿಕಾರಿಗಳ ನಿರ್ಲಕ್ಷ$್ಯದಿಂದಾಗಿ ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬ ಪರಿಸ್ಥಿತಿ ರೈತರದಾಗಿದೆ. ತುಂಗಭದ್ರಾ ನದಿಯಲ್ಲಿ ನೀರಿದ್ದರೂ, ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕೆರೆಗಳನ್ನು ತುಂಬಿಸಲು ಸಾಧ್ಯವಾಗುತ್ತಿಲ್ಲ. ಸಂಸದ ಬಿ.ವೈ. ರಾವೇಂದ್ರ ಅವರು ಅಧಿ-ಕಾರಿಗಳಿಗೆ ಕರೆ ಮಾಡಿ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ತಿಳಿಸಿದರೂ ನಿರ್ಲಕ್ಷ$್ಯ ಮಾಡುತ್ತಿದ್ದಾರೆ. ನದಿಯಲ್ಲಿ ನೀರು ಇದ್ದಾಗ ಸಮರ್ಪಕವಾಗಿ ವಿದ್ಯುತ್ ಪೂರೈಸಿದರೆ ಕೆರೆಗಳು ತುಂಬುತ್ತವೆ. ಎರಡ್ಮೂರು ದಿನಗಳಲ್ಲಿ ಸಮಸ್ಯೆ ನಿವಾರಿಸದಿದ್ದರೆ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಬೇಕಾಗುತ್ತದೆ. ರೈತರ ತಾಳ್ಮೆ ಪರೀಸಬೇಡಿ ಎಂದರು.
ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಕಳೆದ ಬಿಜೆಪಿ ಸರ್ಕಾರದಲ್ಲಿ ಸರ್ವ ಏತ ನೀರಾವರಿ ಯೋಜನೆ ಜಾರಿಯಾಗಿದೆ. ಸ್ಥಳಿಯ ಶಾಸಕ ಯು.ಬಿ. ಬಣಕಾರ ಅವರು ಸಚಿವ ಸತೀಶ ಜಾರಕಿಹೊಳಿ ಅವರನ್ನು ಕರೆಸಿ, ಯೋಜನೆಗೆ ಕಾಂಗ್ರೆಸ್ ಸರ್ಕಾರ ಅನುದಾನ ನೀಡಿದೆ ಎಂದು ಹೇಳಿಸಿದ್ದಾರೆ. ನಾವು ಮಾಡಿದ ಎಲ್ಲ ಕೆಲಸ, ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಹೀಗಾಗಿ, ಅವರನ್ನು ನಾವು ಕತ್ತರಿ ಎಂಎಲ್ಎ ಎಂದು ಕರೆಯುತ್ತೇವೆ. ಅವರು ಯಾವೊಂದು ಯೋಜನೆ ತಂದಿಲ್ಲ ಎಂದು ಲೇವಡಿ ಮಾಡಿದರು.
ಏತ ನೀರಾವರಿ ಯೋಜನೆಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಿ, ಎಲ್ಲ ಮೋಟರ್ಗಳು ಚಾಲನೆ ಮಾಡಬೇಕು. ಶಿಕಾರಿಪುರ ಯೋಜನೆಯಿಂದ ಹಿರೇಕೆರೂರು ತಾಲೂಕಿನ ಕೆರೆಗಳು ತುಂಬುತ್ತವೆ. ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣ ಕಡೆಗಣಿಸಿದೆ. ರೈತರನ್ನು ಉಳಿಸಲು ಯಾವ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದರು.
ಮನವಿ ಸ್ವೀಕರಿಸಿದ ಕೆಪಿಟಿಸಿಎಲ್ ಮುಖ್ಯ ಇಂಜಿನಿಯರ್ ಬಸವರಾಜ ಮಾತನಾಡಿ, ಗ್ರಿಡ್ನಲ್ಲಿ ಕೆಲ ಸಮಸ್ಯೆಗಳು ಇದ್ದ ಕಾರಣ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸಾಧ್ಯವಾಗಿರಲಿಲ್ಲ. ಯಾವುದೇ ಸಮಸ್ಯೆ ಉಂಟಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗುವುದು ಎಂದು ಹೇಳಿದರು.
ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ, ಮಾಜಿ ಶಾಸಕ ಅರುಣಕುಮಾರ ಪೂಜಾರ, ದೇವರಾಜ ನಾಗಣ್ಣನವರ, ಹನುಮಂತಪ್ಪ, ಗುರುಮೂತಿರ್, ಆರ್.ಎನ್. ಗಂಗೋಳ, ಹನುಮಂತಪ್ಪ ಗಾಜೇರ ಇತರರು ಇದ್ದರು.