ರಾಣೆಬೆನ್ನೂರು: ಖಾಸಗಿ ಶಾಲಾ-ಕಾಲೇಜ್ಗಳಲ್ಲಿ ಡೋನೆಷನ್ ಹಾವಳಿ ತಪ್ಪಿಸಬೇಕು. ಕಾನೂನು ಉಲ್ಲಂಘಿಸಿ ಡೋನೆಷನ್ ತೆಗೆದುಕೊಳ್ಳುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾಥಿರ್ ಫೆಡರೇಶನ್ (ಎಸ್ಎಫ್ಐ) ತಾಲೂಕು ಟಕದ ವತಿಯಿಂದ ನಗರದ ಹಲಗೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಂಟನೆಯ ತಾಲೂಕು ಅಧ್ಯಕ್ಷ ಅರುಣ ನಗವತ್ ಮಾತನಾಡಿ, ಡೋನೆಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ (ಡೊನೇಷನ್ ವಿರೋಧಿ ಸಮಿತಿ) ತಕ್ಷಣ ರಚಿಸಬೇಕು. ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಬೇಕು.
ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾಥಿರ್ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆಯನ್ನು ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು.
ಸರ್ಕಾರ ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರವನ್ನು ಮಾಧ್ಯಮಗಳ ಮೂಲಕ ಮತ್ತು ಚಿತ್ತಿ ಪತ್ರ. ಕರಪತ್ರಗಳ ಮೂಲಕ ಪ್ರಚಾರ ಪಡಿಸಬೇಕು. ಶಿಕ್ಷಣ ಸಂಸ್ಥೆಗಳು ಪ್ರತಿ ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ವಿದ್ಯಾಥಿರ್ಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚಚಿರ್ಸುವಂತೆ ನಿರ್ದೇಶಿಸಬೇಕು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ- ಕಾಲೇಜುಗಳ ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರದಶಿರ್ಸಬೇಕು. ನಿಯಮ ಮೀರಿ ಡೋನೆಷನ್ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ದಂಡ ಮತ್ತು ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಬಿಇಒ ಶ್ಯಾಮಸುಂದರ ಅಡಿಗ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರಮುಖರಾದ ಶಿವಕುಮಾರ ಹೊಟ್ಟಿಗೌಡ್ರು, ಶಷಾಂಕ ಉಜ್ಜನಗೌಡ, ಪರಮೇಶ ಮಲ್ಲಾಡದ, ನಿತೀಶ ಬಾಕಿರ್, ತರುಣ ಕೊರಕಲಿ, ನಾಗರಾಜ ಲಮಾಣಿ, ವಿನಾಯಕ ಮಡಿವಾಳರ, ಪರಶುರಾಮ ನಾಗಪುರ, ಚೇತನ ಉಪ್ಪಾರ, ವಿನಯ ದೊಡ್ಡಮನಿ, ಬೀರೇಶ ಹಲವಾಗಲು, ಜಯಂತ ದಾವಣಗೆರೆ, ಹರೀಶ ನಾಯಕ, ಕುಮಾರ ಚೌಡಕಿ ಮತ್ತಿತರರು ಪಾಲ್ಗೊಂಡಿದ್ದರು.