ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ಧಮಾರ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೊಂಬಳಿ ಗ್ರಾಮದಲ್ಲಿ ನಡೆದಿದೆ.
ಮೈಲಾರಪ್ಪ ಶಿವಾನಂದಪ್ಪ ಹರಿಜನ (34) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಬೆಳೆದಿರಲಿಲ್ಲ. ಇದರಿಂದ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.