ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ದ್ಯಾಮವ್ವನ ಗುಡಿ ಓಣಿಯಲ್ಲಿ ನಡೆದಿದೆ.
ಸತೀಶ ರೇವಣೆಪ್ಪ ಮೋಟೆಬೆನ್ನೂರ (46) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ಸಹಕಾರಿ ಸಂಘದಲ್ಲಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆಯಿಂದ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿನ ದನದ ಕೊಟ್ಟಿಗೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.