Crime 
ಹಾವೇರಿ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

ಬಂಕಾಪುರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಬಾಡ ಗ್ರಾಮದಲ್ಲಿ ನಡೆದಿದೆ.

ಗೋಪಾಲ ನಿಂಗಪ್ಪ ಕೀರ್ತೆಪ್ಪನವರ (49) ಮೃತ ವ್ಯಕ್ತಿ.

ಇವರು ಕೃಷಿಗಾಗಿ ಬ್ಯಾಮಖ್ ಹಾಗೂ ಕೈಗಡವಾಗಿ 2.15 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೂಡ ಸರಿಯಾಗಿ ಬಂದಿರಲಿಲ್ಲ. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.