Crime 
ಹಾವೇರಿ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.

ಹರೀಶ ಉಳಿವೆಪ್ಪ ಮಾಗೋಡ (26) ಮೃತ ರೈತ.

ಇವರು ಬ್ಯಾಂಕ್ ಹಾಗೂ ವಿವಿಧ ಸಂ ಸಂಸ್ಥೆಗಳಲ್ಲಿ 4.80 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.