Crime 
ಹಾವೇರಿ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕರಿಯಪ್ಪ ಅರಳಿಕಟ್ಟಿ

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ನಡೆದಿದೆ.

ಪರಸಪ್ಪ ಮಲ್ಲಪ್ಪ ಬಣಕಾರ (42) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ವಿವಿಧ ಸಹಕಾರ ಸಂಘಗಳಲ್ಲಿ 1.90 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.