ರಾಣೆಬೆನ್ನೂರ: ಕಳ್ಳತನ ಮಾಡಿದ ಬಂಗಾರವನ್ನು ಬೆನಕ ಗೋಲ್ಡ್ ಕಂಪನಿಗೆ ಮಾರಾಟ ಮಾಡಲು ಯತ್ನಿಸಿದ ಮಹಿಳೆಯನ್ನು ರಾಣೆಬೇನ್ನೂರ ಶಹರ ಠಾಣೆ ಪೋಲಿಸರು ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ.
ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೆಕಾರ(31) ಬಂಧಿತವಾದ ಮಹಿಳೆ.
ಇವಳು ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿಕೊಂಡು ಬಂದ ಸುಮಾರು 236 ಗ್ರಾಂ ಚಿನ್ನವನ್ನು ಮಾರಾಟ ಮಾಡಲು ರಾಣೆಬೇನ್ನೂರ ನಗರದ ಬೆನಕ ಗೊಲ್ಡ್ ಕಂಪನಿಗೆ ಬಂದಿದ್ದಳು ಎನ್ನಲಾಗಿದೆ. ಈ ಸಮಯದಲ್ಲಿ ಬೆನಕ ಗೊಲ್ಡ್ ಕಂಪನಿಯ ಸಿಬ್ಬಂದಿಗೆ ಅನುಮಾನ ಮೂಡಿದ ಹಿನ್ನಲೆ ಸ್ಥಳೀಯ ಶಹರ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಪೋಲಿಸರು ಆಗಮಿಸಿ ಮಹಿಳೆಯನ್ನು ವಶಪಡಿಸಿಕೊಂಡ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ಕುರಿತು ಶಹರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.