Haveri, BJP, Mahila Morcha, Protest,  
ಹಾವೇರಿ

ಕಾಂಗ್ರೆಸ್ ಮಹಿಳಾ ವಿರೋಧಿ ನೀತಿಗೆ ದಿಕ್ಕಾರ; ಬಿಜೆಪಿ, ನಾರೀಶಕ್ತಿ ಫೋರಂನಿಂದ ಪ್ರತಿಭಟನೆ

ಹಾವೇರಿ: ಬಿಜೆಪಿ ಮತ್ತು ನಾರೀಶಕ್ತಿ ಪೋರಂ ಹಾವೇರಿ ಜಿಲ್ಲೆ ವತಿಯಿಂದ ಶನಿವಾರ ನಗರದಲ್ಲಿ ಶೇಕಡಾ 33ರಷ್ಟು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗಿಕಾರದ ಸಮಯದಲ್ಲಿ ವಿರೋಧಿಸಿದ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟಗಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ರ‌್ಯಾಲಿ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟಗಳ ವಿರುದ್ಧ ದಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಗಾಂಧಿ ಸರ್ಕಲ್‌ವರೆಗೆ ಪ್ರತಿಭಟನೆ ನಡೆಯಿತು.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಬಸಮ್ಮ ಅಬಲೂರ ಮಾತನಾಡಿ, ಸಂಸತ್ತಿನಲ್ಲಿ ವಿಶೇಷ ಅದಿವೇಶನದಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ 2/3ರಷ್ಟು ಬಹುಮತ ಸಿಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಮಹಂತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ ಉಂಟಾಗಿದೆ. ಇದಕ್ಕೆ ಕಾರಣ ಮಹಿಳಾ ವಿರೋಧಿ ಕಾಂಗ್ರೆಸ್ ಹಾಗೂ ಅದರ ಇಂಡಿ ಒಕ್ಕೂಟ ಕಾರಣ ಎಂದು ದೂರಿದರು.
ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸೀಮಗೌಡ್ರ ಮಾತನಾಡಿ, ಕಾಂಗ್ರೆಸ್ಸಿಗರು ಮಹಿಳಾ ಮೀಸಲಾತಿಯನ್ನು ತಮ್ಮದೇ ಕುಟುಂಬಕ್ಕೆ ಮಾತ್ರ ಸೀಮಿತ ಮಾಡಿಕೊಂಡಿದ್ದಾರೆ. ಇಡೀ ದೇಶದ ಮಹಿಳೆಯರಿಗೆ ರಾಜಕೀಯವಾಗಿ ಯಾವುದೇ ಅವಕಾಶ ಸಿಗದಂತೆ ಮಹಿಳಾ ವಿರೋಧಿ ದೋರಣೆಯನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಡಿಸಿದರು.
ಮಾಜಿ ಸಚಿವ ಬಿ.ಸಿ.ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಶಿವರಾಜ ಸಜ್ಜನರ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ, ಯಲ್ಲಮ್ಮ ಚಲವಾದಿ, ರೇಷ್ಮಾ ಮೇಲಗಿರಿ, ನಂಜುಂಡೇಶ ಕಳ್ಳೇರ, ಡಾ.ಸಂತೋಷ ಆಲದಕಟ್ಟಿ, ನೀಲಪ್ಪ ಚಾವಡಿ, ವಿದ್ಯಾ ಶೆಟ್ಟಿ, ವೆಂಕಟೇಶ ನಾರಾಯಣಿ, ಕಿರಣ ಕೊಣನವರ, ನಿರಂಜನ ಹೆರೂರ, ವಿಜಯಕುಮಾರ ಚಿನ್ನಿಕಟ್ಟಿ, ಕಿರಣ ಕೊಳ್ಳಿ, ರೋಹಿಣಿ ಪಾಟೀಲ, ಜಿಲ್ಲಾ ಮತ್ತು ಮಂಡಲಗಳ ಮಹಿಳಾ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮಹಿಳಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.