bjp, womens day, 
ಹಾವೇರಿ

ಮಹಿಳೆಯರು ಗ್ಯಾರಂಟಿ ಯೋಜನೆಗೆ ಮೋಸ ಹೋಗಬೇಡಿ; ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಬಸಮ್ಮ ಅಬಲೂರ ಮನವಿ

ಹಾವೇರಿ: ಮುಂಬರುವ ಚುನಾವಣೆಗಳಲ್ಲಿ ನಾಡಿನ ಮಹಿಳೆಯರು ಗ್ಯಾರಂಟಿ ಯೋಜನೆಗಳಿಗೆ, ಆಮಿಷಗಳಿಗೆ ಮೋಸ ಹೋಗದೇ, ತಮ್ಮ ಸಂವಿಧಾನ ಬದ್ಧ ಹಕ್ಕು ಚಲಾಯಿಸಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಸರ್ಕಾರವನ್ನು ಆಡಳಿತಕ್ಕೆ ತರಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಬಸಮ್ಮ ಅಬಲೂರ ಮನವಿ ಮಾಡಿದರು.
ನಗರದ ಕಾಗಿನೆಲೆ ರಸ್ತೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಚಾರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರು ವಿವಿಧ ರಂಗದಲ್ಲಿ ಯಶಸ್ಸು ಗಳಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ನಮ್ಮ ಜಿಲ್ಲೆಯ ಮಹಿಳೆಯರೂ ಸಾಮಾಜಿಕ, ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.
ಬ್ಯಾಡಗಿ ವಕೀಲೆ ಭಾರತಿ ಕುಲಕರ್ಣಿ ಮಹಿಳೆಯರ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಉಪನ್ಯಾಸ ನೀಡಿದರು. ಮಾಜಿ ಸಚಿವ ಬಿ.ಸಿ.ಪಾಟೀಲ, ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಅರುಣಕುಮಾರ ಪೂಜಾರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸೀಮಗೌಡ್ರ ಮಾತನಾಡಿದರು.
ಜಿಲ್ಲೆಯ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಸಿರಿಧಾನ್ಯಗಳಿಂದ ತಯಾರಿಸಿದ ವಿವಿಧ ಖಾದ್ಯಗಳನ್ನು ಪ್ರದರ್ಶಿಸಲಾಯಿತು.
ನೀಲಪ್ಪ ಚಾವಡಿ, ವಿಜಯಕುಮಾರ ಚಿನ್ನಿಕಟ್ಟಿ, ಮಾರುತಿ ಗೊರವರ, ನಂಜುಂಡೇಶ ಕಳ್ಳೇರ, ಸಂಜೀವಯ್ಯ ಕಬ್ಬಿನಕಂತಿಮಠ, ಇತರರು, ಉಪಸ್ಥಿತರಿದ್ದರು. ಭಾರತಿ ಯಾವಗಲ್ ವಂದೇ ಮಾತರಂ ಗೀತೆ ಹಾಡಿದರು. ಲತಾ ಬಡ್ನಿಮಠ ಸ್ವಾಗತಿಸಿದರು. ವಿದ್ಯಾ ಶೆಟ್ಟಿ ನಿರೂಪಿಸಿದರು. ರೋಹಿಣಿ ಪಾಟೀಲ ವಂದಿಸಿದರು.