haveri-bmips-school, 
ಹಾವೇರಿ

ಬಿ.ಎಂ. ಇಂಟರ್ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ವಿಜೇತರಿಗೆ ಬಹುಮಾನ

ಕೇಶವಮೂರ್ತಿ ಬೇಲೂರಪ್ಪನವರ
ಹಾವೇರಿ: ತಾಲೂಕು ದೇವಗಿರಿಯ ಬಿ.ಎಂ. ಇಂಟರ್ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪಾಲಕರೇ ಮಕ್ಕಳಿಗೆ ಪ್ರಶಸ್ತಿ ವಿತರಿಸಿ ಸಂತಸಪಟ್ಟರು. ಸಂಸ್ಥೆಯ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಪ್ರಾಂಶುಪಾಲ ಡಾ.ಸಂತೋಷ ಕೃಷ್ಣಾಪುರ, ಉಪ ಪಾಂಶುಪಾಲೆ ಮೇರಿ ಸಿ.ಎಲ್., ವಿಶಾಲಾಕ್ಷಿ ಮುದಿಗೌಡ್ರ, ಇತರರಿದ್ದರು.