ಹಾವೇರಿ/ ಬ್ಯಾಡಗಿ: ಬ್ಯಾಡಗಿ ತಾಲೂಕಿನ ಹಿರೇಅಣಜಿ ಗ್ರಾಮದ ಬಳಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಶಿಕಾರಿಪುರ ಅಥವಾ ಶಿರಾಳಕೊಪ್ಪ ಕಡೆಯಿಂದ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆನೆ ಕಂಡು ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಆನೆಯನ್ನು ಪತ್ತೆ ಹಚ್ಚಿದ್ದಾರೆ. ಹಿರೇಅಣಜಿ ಬಳಿ ನೀಲಗಿರಿ ನೆಡುತೋಪಿನಲ್ಲಿ ಒಂಟಿ ಸಲಗ ಕುಳಿತುಕೊಂಡಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ. ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಡಿಸಿಎಫ್ ಅಬ್ದುಲ್ ಅಜೀಜ್ ಶೇಖ್ 'ವಿಜಯವಾಣಿ'ಗೆ ತಿಳಿಸಿದ್ದಾರೆ.