babu jagajeevan ram, birthday,
ಹಾವೇರಿ: ಡಾ.ಬಾಬು ಜಗಜೀವನರಾಂ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮಹಾನ್ ನಾಯಕರು. ಕೃಷಿ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಮೂಲಕ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧಿ ಪಡೆದಿದ್ದಾರೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭಾನುವಾರ ಸಾಂಕೇತಿವಾಗಿ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿ.ಪಂ.ಉಪಕಾರ್ಯದರ್ಶಿ ಡಾ.ಪುನಿತ ಬಿ.ಆರ್., ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದ ಮುಖಂಡರು, ಇತರರು ಉಪಸ್ಥಿತರಿದ್ದರು.