ಹಾವೇರಿ: ತಾಲೂಕಿನ ದೇವಗಿರಿ ಬಳಿಯ ಜಿಲ್ಲಾಡಳಿತ ಭವನದಲ್ಲಿ ಬೆಳೆದಿದ್ದ 1.20 ಲಕ್ಷ ರೂ. ಮೌಲ್ಯದ ಗಂಧದ ಮರಗಳನ್ನು ಯಾರೋ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಜಿಲ್ಲಾಡಳಿತ ಭವನದ ಆವರಣದಲ್ಲಿ ಗಂಧದ ಗಿಡಗಳನ್ನು ಬೆಳೆಯಲಾಗಿತ್ತು. ಯಾರೋ ಕಳ್ಳರು ರಾತ್ರಿ ಸಮಯದಲ್ಲಿ ಬಂದು 1.20 ಲಕ್ಷ ರೂ. ಮೌಲ್ಯದ 4 ಮರಗಳನ್ನು ಕಡಿದುಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.