Haveri, Devagiri, Bapuji School, Gold Medal,
ಹಾವೇರಿ: ತಾಲೂಕಿನ ದೇವಗಿರಿ ಗ್ರಾಮದ ಬಾಪೂಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ ಧನುಷ್ ದೊಡ್ಡಫಕ್ಕೀರಪ್ಪ ಅಜ್ಜಣ್ಣನವರ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವರ್ಲ್ಡ್ ರಾ ಪವರ್ ಲಿಫ್ಟಿಂಗ್ ಫೆಡರೇಷನ್ ಆಫ್ ಇಂಡಿಯಾ ಸೌಥ್ ರೆನ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ 360 ಕೆಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾನೆ. ಈತನ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.