Haveri, Ex Speaker, KB Koliwad, Byte, 
ಹಾವೇರಿ

ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು; ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿಕೆ

ಪ್ರಮುಖ ಮುಖ್ಯಾಂಶಗಳು

  • ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟದ್ದು
  • ಅದರ ಬಗ್ಗೆ ನಾನು ಮಾತನಾಡುವುದಿಲ್ಲ
  • ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ
ರಾಣೆಬೇನ್ನೂರ: ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದ್ದು, ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ಈಗಾಗಲೇ ಸಿಎಂ, ಡಿಸಿಎಂ ಪರಸ್ಪರ ಭೇಟಿಯಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದ್ದು, ಬಹುಮತದೊಂದಿಗೆ ನಮ್ಮ ಸರ್ಕಾರವೂ ಭದ್ರವಾಗಿದೆ ಎಂದರು.
ಇನ್ನೂ ಶಾಸಕರಾದ ಶ್ರೀನಿವಾಸ ಮಾನೆ, ಯಾಸೀರ್‌ಖಾನ್ ಪಠಾಣ ಹಾಗೂ ಪ್ರಕಾಶ ಕೋಳಿವಾಡ ಅವರು ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿಯಾದ ವಿಚಾದ ಕುರಿತು ಪ್ರತಿಕ್ರಿಯಿಸಿದ ಅವರು, ಹಾವೇರಿ ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಆ ನಿರ್ಣಯ ವರಿಷ್ಠರಗೆ ಬಿಟ್ಟ ವಿಚಾರವಾಗಿದೆ ಎಂದರು.
ನಮ್ಮ ಜಿಲ್ಲೆಯಿಂದ ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ ಸಿಎಂ-ಡಿಸಿಎಂ ಅವರು ಹಾವೇರಿ ಜಿಲ್ಲೆಯನ್ನು ಪರಿಗಣಿಸಿ, ಈ ಬಾರಿ ಸಚಿವ ಸ್ಥಾನ ನೀಡಬಹುದು ಎಂಬ ನಂಬಿಕೆ ಇದೆ ಎಂದು ಹೇಳಿದರು.