Haveri, Govt Schools, Teachers, Job, Vacant, 
ಹಾವೇರಿ

ಜಿಲ್ಲೆಯಲ್ಲಿ 1,741 ಶಿಕ್ಷಕರ ಹುದ್ದೆ ಖಾಲಿ; ಸರ್ಕಾರಿ ಶಾಲೆಗಳಿಗೆ ಮಂಜೂರಾಗಿದ್ದು 7,370, ಇರುವುದು 5,629; ಅತಿಥಿ ಶಿಕ್ಷಕರಿಗಾಗಿ ಕಾಯುವ ಪರಿಸ್ಥಿತಿ

ಹಾವೇರಿ: ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಒಂದಾಗಿರುವ ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ಒಟ್ಟು 1,741 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಜೂನ್ 1ರಿಂದ ಶಾಲೆ ಆರಂಭವಾಗುತ್ತಿದ್ದು, ಅತಿಥಿ ಶಿಕ್ಷಕರಿಗಾಗಿ ಕಾಯುವಂತಾಗಿದೆ.
ಜಿಲ್ಲೆಯಲ್ಲಿ ಒಟ್ಟು 1,120 ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 163 ಸರ್ಕಾರಿ ಪ್ರೌಢಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. 216 ಅನುದಾನಿತ, 304 ಅನುದಾನ ರಹಿತ ಶಾಲೆಗಳಿವೆ. ಈ ಶಾಲೆಗಳಿಗೆ ಒಟ್ಟು 7,370 ಶಿಕ್ಷಕರ ಹುದ್ದೆಗಳನ್ನು ಸರ್ಕಾರ ಮಂಜೂರು ಮಾಡಿದೆ. ಆದರೆ, ಸದ್ಯಕ್ಕೆ 5,629 ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 1,741 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 6,074 ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು 4,704 ಶಿಕ್ಷಕರು ಸೇವೆಯಲ್ಲಿದ್ದಾರೆ. 1,370 ಹುದ್ದೆಗಳು ಖಾಲಿ ಇವೆ. ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಿಗೆ 1,296 ಹುದ್ದೆಗಳು ಮಂಜೂರಾಗಿದ್ದು, 925 ಶಿಕ್ಷಕರು ಸೇವೆಯಲಿದ್ದಾರೆ. 271 ಹುದ್ದೆಗಳು ಖಾಲಿ ಇವೆ.
ಶಿಕ್ಷಕರ ಕೊರತೆ ಹಿನ್ನೆಲೆ ಕಳೆದ ವರ್ಷ ರಾಜ್ಯ ಸರ್ಕಾರ ಜಿಲ್ಲೆಗೆ ಸಾವಿರಕ್ಕೂ ಅಧಿಕ ಅತಿಥಿ ಶಿಕ್ಷಕರನ್ನು ನೇಮಿಸಿತ್ತು. ಈ ಬಾರಿಯೂ ಸುಮಾರು 1,200ಕ್ಕೂ ಅಧಿಕ ಅತಿಥಿ ಶಿಕ್ಷಕರನ್ನು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಬೇಕಿದೆ. ಇದರ ಜತೆಗೆ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡಬೇಕು ಎಂಬ ಆಗ್ರಹ ಜಿಲ್ಲೆಯ ಜನತೆಯಿಂದ ಕೇಳಿ ಬಂದಿದೆ.
ಹಾನಗಲ್ಲ ತಾಲೂಕು ಹೆಚ್ಚು, ಬ್ಯಾಡಗಿ ಕಡಿಮೆ
ಜಿಲ್ಲೆಯಲ್ಲಿ ಹಾನಗಲ್ಲ ತಾಲೂಕಿನಲ್ಲಿ ಅತಿ ಹೆಚ್ಚು ಶಿಕ್ಷಕರ ಕೊರತೆ ಎದುರಾಗಿದೆ. ಪ್ರಾಥಮಿಕ ಶಾಲೆಗಳಿಗೆ 1,125 ಶಿಕ್ಷಕರ ಹುದ್ದೆ ಮಂಜೂರಾಗಿದ್ದು, 811 ಶಿಕ್ಷಕರು ಸದ್ಯ ಸೇವೆ ಸಲ್ಲಿಸುತ್ತಿದ್ದಾರೆ. 314 ಶಿಕ್ಷಕರ ಹುದ್ದೆ ಖಾಲಿ ಇವೆ. ಸವಣೂರ ತಾಲೂಕಿಗೆ 725 ಶಿಕ್ಷಕರ ಹುದ್ದೆ ಮಂಜೂರಾಗಿದ್ದು, 452 ಶಿಕ್ಷಕರು ಸೇವೆಯಲ್ಲಿದ್ದಾರೆ. 273 ಹುದ್ದೆ ಖಾಲಿ ಉಳಿದಿವೆ. ಶಿಗ್ಗಾಂವಿ ತಾಲೂಕಿನಲ್ಲಿ 246, ಹಾವೇರಿಯಲ್ಲಿ 204, ಹಿರೇಕೆರೂರ 132, ರಾಣೆಬೆನ್ನೂರ 104, ಬ್ಯಾಡಗಿ ತಾಲೂಕಿನಲ್ಲಿ ಕಡಿಮೆ ಅಂದರೆ 97 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ.
ಹೇಗೆ ನಡೆಯುತ್ತೆ ಆಯ್ಕೆ ?
ಅತಿಥಿ ಶಿಕ್ಷಕರ ನೇಮಕಾತಿ ಬಗ್ಗೆ ಎಸ್‌ಡಿಎಂಸಿ ವತಿಯಿಂದ ಆಯಾ ಗ್ರಾಮ ಪಂಚಾಯ್ತಿ, ಬಸ್ ನಿಲ್ದಾಣ, ಇತರೆಡೆಗಳಲ್ಲಿ ಸಾರ್ವಜನಿಕರ ನೋಟಿಸ್ ಅಂಟಿಸಲಾಗುತ್ತದೆ. ಪ್ರಾಥಮಿಕ ಶಾಲೆಗೆ ಡಿಎಡ್ ಹಾಗೂ ಪ್ರೌಢಶಾಲೆಗೆ ಬಿಎಡ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಾರೆ. ನಂತರ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
"

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರದಲ್ಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುವುದು. ವಿದ್ಯಾರ್ಥಿಗಳ ಪಾಠ ಬೋಧನೆಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರದಲ್ಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುವುದು. ವಿದ್ಯಾರ್ಥಿಗಳ ಪಾಠ ಬೋಧನೆಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

— ಮೋಹನ ದಂಡಿನ, ಡಿಡಿಪಿಐ


"

ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಮಾಡುತ್ತಿದೆ. ಈ ಸಲ ಶಾಲಾ ಪ್ರಾರಂಭದಿಂದಲೇ ನೇಮಕ ಮಾಡಬೇಕಿತ್ತು. ಇದರಿಂದ ಶೈಕ್ಷಣಿಕ ವರ್ಷ ಆರಂಭದಲ್ಲೇ ಉತ್ತಮ ಶಿಕ್ಷಣ ನೀಡಲು ಸಹಕಾರಿ ಆಗುತ್ತದೆ. ಶೀಘ್ರದಲ್ಲೇ ನೇಮಕಾತಿ ಆದೇಶ ಹೊರಡಿಸಬೇಕು. ಖಾಯಂ ಶಿಕ್ಷಕರ ನೇಮಕಕ್ಕೆ ಕ್ರಮ ಜರುಗಿಸಬೇಕು.ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಮಾಡುತ್ತಿದೆ. ಈ ಸಲ ಶಾಲಾ ಪ್ರಾರಂಭದಿಂದಲೇ ನೇಮಕ ಮಾಡಬೇಕಿತ್ತು. ಇದರಿಂದ ಶೈಕ್ಷಣಿಕ ವರ್ಷ ಆರಂಭದಲ್ಲೇ ಉತ್ತಮ ಶಿಕ್ಷಣ ನೀಡಲು ಸಹಕಾರಿ ಆಗುತ್ತದೆ. ಶೀಘ್ರದಲ್ಲೇ ನೇಮಕಾತಿ ಆದೇಶ ಹೊರಡಿಸಬೇಕು. ಖಾಯಂ ಶಿಕ್ಷಕರ ನೇಮಕಕ್ಕೆ ಕ್ರಮ ಜರುಗಿಸಬೇಕು.

— ಮಲ್ಲೇಶ ಕರಿಗಾರ, ಜಿಲ್ಲಾಧ್ಯಕ್ಷ, ರಾಜ್ಯ ಸರ್ಕಾರಿ ನೌಕರರ ಸಂಘ


ಖಾಲಿ ಹುದ್ದೆಗಳ ತಾಲೂಕಾವಾರು ಅಂಕಿ-ಅಂಶ (ಪ್ರಾಥಮಿಕ ಶಾಲೆಗಳು)
ತಾಲೂಕು ಮಂಜೂರಾದ ಹುದ್ದೆಗಳು ಹಾಲಿ ಇರುವ ಶಿಕ್ಷಕರು ಖಾಲಿ ಹುದ್ದೆ
ಬ್ಯಾಡಗಿ 548 451 97
ಹಾನಗಲ್ಲ 1125 811 314
ಹಾವೇರಿ 973 769 204
ಹಿರೇಕೆರೂರ 910 778 132
ರಾಣೆಬೆನ್ನೂರ 958 854 104
ಸವಣೂರ 725 452 273
ಶಿಗ್ಗಾಂವ 835 589 246
----------------------------------------------------------------------------------------
ಒಟ್ಟು 6,074 4,704 1,370