Haveri, Hanagal, BEO, World Environment Day, Drawing Compitation,
ಹಾವೇರಿ: ಕನ್ನಡದ ನಂಬರ್ ಒನ್ ದಿನಪತ್ರಿಕೆ ‘ವಿಜಯವಾಣಿ’ ವತಿಯಿಂದ ಹಾನಗಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಹಾನಗಲ್ಲ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಹಾನಗಲ್ಲ ನಗರದ ಗುರು ಭವನದಲ್ಲಿ ಜೂ.22ರಂದು ಬೆಳಗ್ಗೆ 10.30ಕ್ಕೆ ಶಾಲಾ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಹಾಗೂ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ವ್ಯಾಸಂಗ ಮಾಡುವ 6ರಿಂದ 10ನೇ ತರಗತಿಯ ಒಳಗಿನ ಶಾಲಾ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪರಿಸರ ಜಾಗೃತಿ ಮೂಡಿಸುವ ಕುರಿತು ಒಂದು ಗಂಟೆಯ ಅವಧಿಯಲ್ಲಿ ಚಿತ್ರ ಬಿಡಿಸಲು ಅವಕಾಶ ನೀಡಲಾಗುವುದು. ಕೊನೆಯಲ್ಲಿ ಸ್ಥಳದಲ್ಲೇ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಸಮಾರಂಭದಲ್ಲಿ ಹಾನಗಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ.ಚಿನ್ನಿಕಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಶಿವಾನಂದ ಪೂಜಾರ, ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಗಣೇಶ ಶೆಟ್ಟರ್, ಇತರ ಗಣ್ಯರು ಭಾಗವಹಿಸಲಿದ್ದಾರೆ.
ಪ್ರಥಮ ಬಹುಮಾನ 3,000 ರೂ., ದ್ವಿತೀಯ ಬಹುಮಾನ 2,000 ರೂ., ತೃತೀಯ ಬಹುಮಾನ 1,000 ರೂ. ನಗದು ಬಹುಮಾನ ವಿತರಿಸಲಾಗುವುದು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ನೀಡಲಾಗುವುದು. ಪ್ರವೇಶ ಉಚಿತವಾಗಿದ್ದು, ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತರು ಮೊ.ಸಂ. 98867 32553 ಅಥವಾ ಮೊ.ಸಂ. 88844 32416 ಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು.
ಚಿತ್ರ ಬಿಡಿಸಲು ಡ್ರಾಯಿಂಗ್ ಶೀಟ್ ನೀಡಲಾಗುವುದು. ಪೆನ್ಸಿಲ್, ಬಣ್ಣ, ಸ್ಕೆಚ್ ಪೆನ್, ಇತರ ಸಾಮಗ್ರಿಗಳನ್ನು ವಿದ್ಯಾರ್ಥಿಗಳೇ ತೆಗೆದುಕೊಂಡು ಬರಬೇಕು. ಕಾರ್ಯಕ್ರಮದ ನಂತರ ಉಪಾಹಾರ ವ್ಯವಸ್ಥೆ ಇರುತ್ತದೆ.