prasada-nilaya 
ಹಾವೇರಿ

ಹುಕ್ಕೇರಿ ಮಠದ ಉಚಿತ ಪ್ರಸಾದ ನಿಲಯಕ್ಕೆ ಭೂಮಿಪೂಜೆ

ಹಾವೇರಿ: ನಗರದ ಹುಕ್ಕೇರಿ ಮಠದ ವತಿಯಿಂದ ಒಂದು ಸಾವಿರ ಮಕ್ಕಳಿಗೆ ಉಚಿತ ಪ್ರಸಾದ ಮತ್ತು ವಸತಿ ನಿಲಯ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದ ಭೂಮಿ ಪೂಜೆಯನ್ನು ವಿಧಾನಸಭಾ ಅಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ನಗರದ ಶಿವಬಸವ ಕಲ್ಯಾಣ ಮಂಟಪದ ಬಳಿ ಮಂಗಳವಾರ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕ, ಬಡ ಮಕ್ಕಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಶ್ರೀ ಹುಕ್ಕೇರಿ ಮಠದಿಂದ ನಿರ್ಮಿಸುತ್ತಿರುವ ಉಚಿತ ವಸತಿ ನಿಲಯಕ್ಕೆ ಶಾಸಕರ ಅನುದಾನದಲ್ಲಿ ಹಾಗೂ ಸರ್ಕಾರದ ವಿಶೇಷ ಅನುದಾನದಲ್ಲಿ ಅನುದಾನ ನೀಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಮಾರಂಭದಲ್ಲಿ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಹುಬ್ಬಳ್ಳಿಯ ಅಭಿನವ ಸಿದ್ಧಾರೂಢ ಸ್ವಾಮೀಜಿ, ಜಾನಪದ ವಿವಿ ಕುಲಪತಿ ಡಾ.ಟಿ.ಎಂ.ಭಾಸ್ಕರ, ಮಾಜಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ, ಎಂ.ಎಸ್.ಕೋರಿಶೆಟ್ಟರ, ಮಹೇಶ ಚಿನ್ನಿಕಟ್ಟಿ, ರಾಜಣ್ಣ ಮಾಗನೂರು, ಕೆ.ಮಂಜಪ್ಪ, ಸುಭಾಸ ಹುರಳಿಕೊಪ್ಪಿ, ನಿರಂಜನ ತಾಂಡೂರ, ಸಂಜೀವಕುಮಾರ ನೀರಲಗಿ, ಶಿವರಾಜ ಅಗಡಿ, ಮತ್ತಿತರರು ಉಪಸ್ಥಿತರಿದ್ದರು.