Kaginele Swamiji 
ಹಾವೇರಿ

ಸಿಎಂ ಮಾಡುವುದು ಸ್ವಾಮೀಜಿಗಳಲ್ಲ ; ಕಾಗಿನೆಲೆಯ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ

ಪ್ರಮುಖ ಮುಖ್ಯಾಂಶಗಳು

  • ಮಠಾಧೀಶರು ಹೇಳಿದ ತಕ್ಷಣ,
  • ಅವರು ಹೇಳಿದವರನ್ನು ಮುಖ್ಯಮಂತ್ರಿ ಬದಲಾವಣೆ ಮಾಡಲು ಸಂವಿಧಾನದಲ್ಲಿ ಅವಕಾಶ ಇದೆಯಾ?
  • ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ
ಹಾವೇರಿ: ಮಠಾಧೀಶರು ಹೇಳಿದ ತಕ್ಷಣ, ಅವರು ಹೇಳಿದವರನ್ನು ಮುಖ್ಯಮಂತ್ರಿ ಬದಲಾವಣೆ ಮಾಡಲು ಸಂವಿಧಾನದಲ್ಲಿ ಅವಕಾಶ ಇದೆಯಾ? ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ಜನರಿಂದ ಆಯ್ಕೆಯಾಗಿರುವ ಶಾಸಕರಿಗೆ ಇದೆ. ಸ್ವಾಮೀಜಿಗಳಲ್ಲ ಎಂದು ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಬೇಕು ಎಂದು ನಿರ್ಮಲಾನಂದ ಸ್ವಾಮೀಜಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆ ಮಾಡುವಂಥದ್ದು, ಆಯ್ಕೆ ಮಾಡುವಂಥದ್ದು, ಸಾಂವಿಧಾನಿಕ ಹುದ್ದೆಯಲ್ಲಿರುವ ಶಾಸಕರ ಅಧಿಕಾರ. ಹಾಗಾಗಿ, ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಶಾಸಕರೇ ನಿರ್ಣಯ ಮಾಡುತ್ತಾರೆ. ಅದು ಬಿಟ್ಟು ಯಾವುದೋ ಒಬ್ಬ ಸ್ವಾಮೀಜಿ ಮಾಡುವುದಿಲ್ಲ ಎಂದರು.