koraduru, anjaneya swamy, jatre,
ಹಾವೇರಿ: ತಾಲೂಕು ಕೊರಡೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಐದನೇ ವರ್ಷದ ರಥೋತ್ಸವ ಬುಧವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ನೆಗಳೂರಿನ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ನೂರಾರು ಭಕ್ತರು, ವಿವಿಧ ವಾದ್ಯ ವೃಂದಗಳು ಪಾಲ್ಗೊಂಡಿದ್ದವು.