ಹಾವೇರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 8 ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ 1 ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ಏ.12ರಂದು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಆನ್‌ಲೈನ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್ https://dom.karnataka.gov.in/en ಪಡೆಯಬಹುದು. ಪರೀಕ್ಷಾ ದಿನದಂದು ಪ್ರವೇಶ ಪರೀಕ್ಷೆಯ ಪತ್ರದೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಅಥವಾ ಶಾಲಾ ಗುರುತಿನ ಚೀಟಿ ಇವುಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತ್ತು ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.