Haveri, MLA, Shivannanavar, Followers, Pressmeet,  
ಹಾವೇರಿ

ಬಸವರಾಜ ಶಿವಣ್ಣನವರಿಗೆ ಸಚಿವ ಸ್ಥಾನ ನೀಡಿ; ಕುರಿ-ಮೇಕೆ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕ ಜೋಗಿ ಆಗ್ರಹ

ಹಾವೇರಿ: ರೈತರು, ಕುರಿಗಾಯಿಗಳು ಹಾಗೂ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರಗೆ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಕುರಿ ಮತ್ತು ಮೇಕೆ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕ ಜೋಗಿ ಜಯಪ್ಪ ಆಗ್ರಹಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಶಿವಣ್ಣನವರ ಹಲವು ವರ್ಷಗಳಿಂದ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಜೆ.ಎಚ್.ಪಟೇಲ ಸರ್ಕಾರದಲ್ಲಿ ಪರಿಸರ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಅನುಭವಿ ನಾಯಕರಿಗೆ ಸಚಿವ ಸ್ಥಾನ ನೀಡುವುದರಿಂದ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಬಸವರಾಜ ಶಿವಣ್ಣನವರಿಗೆ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ರಾಮಚಂದ್ರ ಹೆಗಡೆ, ಸುರೇಶ ಮೊಟೇಬೆನ್ನೂರ, ತಿರಕಪ್ಪ ಹುಳಕೆಲ್ಲಪ್ಪನವರ, ಹುಚ್ಚಪ್ಪ ಗೊರವರ, ಜಗದೀಶ ಹರ್ನಗಟ್ಟಿ, ಕಲ್ಲಪ್ಪ ಯಲಗಚ್ಚಿನ, ದುರ್ಗಪ್ಪ ದೇವರಗುಡ್ಡ, ಇತರರು ಇದ್ದರು.