puc, exam,  
ಹಾವೇರಿ

ಅರ್ಥಶಾಸ್ತ್ರ ಪರೀಕ್ಷೆಗೆ 268 ವಿದ್ಯಾರ್ಥಿಗಳು ಗೈರು

ಹಾವೇರಿ: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಂಗಳವಾರ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ಸುಸೂತ್ರವಾಗಿ ಜರುಗಿತು.
ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ನಗರದ ಜಿಎಚ್ ಕಾಲೇಜ್, ಎಸ್‌ಜೆಎಂ ಪಿಯು ಕಾಲೇಜ್ ಹಾಗೂ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ, ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಅರ್ಥಶಾಸ್ತ್ರ ಪರೀಕ್ಷೆಗೆ 8,642 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. ಇದರಲ್ಲಿ 8,274 ವಿದ್ಯಾರ್ಥಿಗಳು ಹಾಜರಾಗಿದ್ದು, 368 ಅಭ್ಯರ್ಥಿಗಳು ಗೈರಾಗಿದ್ದರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಯು) ಅಶೋಕ ಶಾಸ್ತ್ರೀ ತಿಳಿಸಿದರು.