Haveri, Rashtrothana Vidya Kendra, Innaguration, On May 31st,
ಹಾವೇರಿ: ತಾಲೂಕಿನ ದೇವಿಹೊಸೂರ ಗ್ರಾಮದ ಬಳಿ ನಿರ್ಮಿಸಿರುವ ರಾಷ್ಟ್ರೋತ್ಥಾನ ಪರಿಷತ್‌ನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಶಾಲಾ ಕಟ್ಟಡದ ಲೋಕಾರ್ಪಣೆ, ಅಕ್ಷರಾಭ್ಯಾಸ ಹಾಗೂ ವಿದ್ಯಾರಂಭ ಕಾರ್ಯಕ್ರಮ ಮೇ 31ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಹುಕ್ಕೇರಿಮಠದ ಡಾ.ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕ ಪ್ರಾಂತ ಕಾರ್ಯವಾಹ ರಾಘವೇಂದ್ರ ಕಾಗವಾಡ ಹಾಗೂ ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ ಹೆಗ್ಡೆ ಹಾಗೂ ಇತರ ಗಣ್ಯರು ಬಾಗವಹಿಸುವರು ಎಂದು ರಾಷ್ಟ್ರೋತ್ಥಾನ ಪರಿಷತ್‌ನ ಪ್ರಕಟಣೆ ತಿಳಿಸಿದೆ.