Haveri, Ration, Dc, Order,
ಹಾವೇರಿ: ಪಡಿತರ ಆಹಾರ ಧಾನ್ಯವನ್ನು ಅನ್ನಭಾಗ್ಯ ವರ್ಗದಡಿ ಮೇ ಹಾಗೂ ಜೂನ್ ಎರಡು ತಿಂಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಒಟ್ಟು 465 ನ್ಯಾಯಬೆಲೆ ಅಂಗಡಿಗಳಿಗೆ ಆಹಾರಧಾನ್ಯ ವಿತರಣೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿ (ಪ್ರತಿ ಫಲಾನುಭವಿಗೆ ಏಕ ಸದಸ್ಯ, ದ್ವಿ ಸದಸ್ಯ, ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ ಚೀಟಿ ಪ್ರತಿ ಫಲಾನುಭವಿಗೆ ಕೇಂದ್ರ ಎನ್‌ಎಫ್‌ಎಸ್‌ಎ ಹಂಚಿಕೆಯ 35 ಕೆಜಿ ಅಕ್ಕಿ ಹೊರತುಪಡಿಸಿ 5.ಕೆ.ಜಿ + 5 ಕೆ.ಜಿ ಸೇರಿ 10 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ.
ಆದ್ಯತಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ರಾಜ್ಯ ಮತ್ತು ಕೇಂದ್ರ ವರ್ಗದಡಿಯ ಪಡಿತರ ಕಾರ್ಡುಗಳಿಗೆ 5.ಕೆ.ಜಿ + 5 ಕೆ.ಜಿ ಸೇರಿ 10 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ.
ಜೂನ್ 2026ರಲ್ಲಿ ರಾಜ್ಯ ವ್ಯಾಪ್ತಿ ಅಂದರೆ, ಅನ್ನಭಾಗ್ಯ ಯೋಜನೆಯಡಿ ಮೇ ಮತ್ತು ಜೂನ್-2026 ಎರಡೂ ಮಾಹೆಗಳ ಪಡಿತರ ಆಹಾರ ಧಾನ್ಯವನ್ನು ವಿತರಿಸಲಾಗುತ್ತಿದ್ದು, ಎಲ್ಲ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಎರಡೂ ಮಾಹೆಗಳಿಗೆ ಸಂಬಂಧಿಸಿದಂತೆ ಒಂದೇ ಬೆರಳಚ್ಚು ನೀಡಿ ಪಡಿತರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.