Haveri, RVK, Innaguration Date, Postponed, Due to Rain,
ಹಾವೇರಿ: ತಾಲೂಕಿನ ದೇವಿಹೊಸೂರ ಗ್ರಾಮದ ಬಳಿ ನಿರ್ಮಿಸಿರುವ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಲೋಕಾರ್ಪಣೆ ಕಾರ್ಯಕ್ರಮವನ್ನು ಮಳೆಯ ಮುನ್ನೆಚ್ಚರಿಕೆ ಕಾರಣದಿಂದ ಮೇ 31ಕ್ಕೆ ಮುಂದೂಡಲಾಗಿದೆ.
ಮೇ 21ರಂದು ಶಾಲಾ ಆವರಣದಲ್ಲಿ ಲೋಕಾರ್ಪಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಮಂತ್ರಣವನ್ನೂ ಹಂಚಿಕೆ ಮಾಡಲಾಗಿತ್ತು. ಆದರೆ, ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಮುಂದಿನ ಕೆಲವು ದಿನಗಳಲ್ಲಿಯೂ ಹಾವೇರಿ ತಾಲೂಕು ಸೇರಿದಂತೆ ಸುತ್ತಮುತ್ತ ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಮಕ್ಕಳು ಹಾಗೂ ಪಾಲಕರ ಸುರಕ್ಷತೆ ದೃಷ್ಟಿಯಿಂದ ಶಾಲಾ ಕಟ್ಟಡದ ಲೋಕಾರ್ಪಣೆ ಸಮಾರಂಭವನ್ನು ಮೇ 31ಕ್ಕೆ ಮುಂದೂಡಲಾಗಿದೆ. ಪಾಲಕರು, ಮಕ್ಕಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ರಾಷ್ಟ್ರೋತ್ಥಾನ ವಿದ್ಯಾಸಂಸ್ಥೆ ಪ್ರಕಟಣೆ ಮೂಲಕ ಮನವಿ ಮಾಡಿದೆ.