17 Sahakara Saptaha  
ಹಾವೇರಿ

ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ನ.18ರಂದು

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ,
  • ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ,
  • ನ.18ರಂದು ಬೆಳಗ್ಗೆ 10 ಗಂಟೆಗೆ ನಗರದ ರಜನಿ ಸಭಾಂಗಣದಲ್ಲಿ
  • 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ
ಹಾವೇರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ, ಮತ್ತಿತರ ಸಹಕಾರ ಸಂಘಗಳ ಸಹಯೋಗದಲ್ಲಿ ನ.18ರಂದು ಬೆಳಗ್ಗೆ 10 ಗಂಟೆಗೆ ನಗರದ ರಜನಿ ಸಭಾಂಗಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಹಕಾರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾನೂನು ಸಚಿವ ಎಚ್.ಕೆ.ಪಾಟೀಲ ಸಹಕಾರಿ ಪಿತಾಮಹರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಅವರಿಂದ ಉತ್ತಮ ಸಹಕಾರಿ ಸಂಘಗಳಿಗೆ ಸನ್ಮಾನ, ಸಂಸದ ಬಸವರಾಜ ಬೊಮ್ಮಾಯಿ ಅವರಿಂದ ಇ-ಫ್ಯಾಕ್ಸ್‌ಗಳ ಪ್ರಮಾಣಪತ್ರ ವಿತರಣೆ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ವಾರ ಪತ್ರಿಕೆ ಅನಾವರಣ ಮಾಡಲಿದ್ದಾರೆ.
 ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸುವರು. ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಳೀಯ ಶಾಸಕರು, ಗಣ್ಯರು, ಸಹಕಾರಿ ಧುರೀಣರು, ಇತರರು ಭಾಗವಹಿಸಲಿದ್ದಾರೆ.