Haveri, SP, Police, Ganja,
ಹಾವೇರಿ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಗಾಂಜಾವನ್ನು ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಯಮಾನುಸಾರ ಸುಟ್ಟು ನಾಶಪಡಿಸಲಾಯಿತು. ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ, ಡಿಎಸ್‌ಪಿಗಳಾದ ಗಿರಿಮಲ್ಲ ತಳಕಟ್ಟಿ, ಲೋಕೇಶ, ಇತರ ಅಧಿಕಾರಿಗಳು, ಸಿಬ್ಬಂದಿ ಇದ್ದರು.