SSLC, Exmas, Free Bus, 
ಹಾವೇರಿ

ಎಸ್.ಎಸ್.ಎಲ್.ಸಿ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ; ಹಾಲ್ ಟಿಕೆಟ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ

ಹಾವೇರಿ: ಎಸ್.ಎಸ್.ಎಲ್.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರ (ಹಾಲ್ ಟಿಕೆಟ್) ತೋರಿಸಿ ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.