Crime 
ಹಾವೇರಿ

ತಲೆನೋವಿನಿಂದ ಬೇಸತ್ತು ಯುವತಿ ಆತ್ಮಹತ್ಯೆ

ರಾಣೆಬೆನ್ನೂರ: ವಿಪರೀತ ತಲೆನೋವು ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಗುಡ್ಶೇಡ್ ರಸ್ತೆಯಲ್ಲಿ ನಡೆದಿದೆ.

ಪ್ರೀತಿ ನಾಗರಾಜ ನಾಯಕರ (19) ಮೃತ ಯುವತಿ.

ಇವಳಿಗೆ ವಿಪರೀತ ತಲೆನೋವು ಹಾಗೂ ಹೊಟ್ಟೆ ನೋವು ಬರುತ್ತಿತ್ತು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.