ಬ್ಯಾಡಗಿ: ಮನೆಯ ಬಾಗಿಲಿಗೆ ಹಾಕಿದ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು 11.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಪ್ರವಿಣ ಕರಿಯಪ್ಪ ಆಡಿನವರ (30) ಎಂಬುವರ ಮನೆ ಕಳ್ಳತನ ಆಗಿರುವುದು.
ಇವರು ಮನೆಯಲ್ಲಿಲ್ಲದ ಸಮಯದಲ್ಲಿ ಯಾರೋ ದುಷ್ಕಮಿರ್ಗಳು ಮನೆ ಬಾಗಿಲ ಬೀಗ ಮುರಿದು ಒಳಗೆ ನುಗ್ಗಿ ಮನೆಯಲ್ಲಿದ್ದ 11.43 ಲಕ್ಷ ರೂ. ಮೌಲ್ಯದ 16 ತೊಲೆ ಚಿನ್ನಾಭರಣ ದೋಚಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.