Crime 
ಹಾವೇರಿ

ಮನೆ ಬಾಗಿಲು ಮುರಿದು 1.19 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ರಾಣೆಬೆನ್ನೂರು: ಮಗಳ ಶಸ್ತ್ರಚಿಕಿತ್ಸೆಗಾಗಿ ಹುಬ್ಬಳ್ಳಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು 1.19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋದ ಘಟನೆ ಇಲ್ಲಿಯ ಬೀರೇಶ್ವರ ನಗರದಲ್ಲಿ ನಡೆದಿದೆ.

ಮಂಜುನಾಥ ಸವಣೂರ (49) ಎಂಬುವರ ಮನೆ ಕಳ್ಳತನವಾಗಿರುವುದು.

ಇವರು ಮಗಳ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ತೆರಳಿದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಮುಂಭಾಗದ ಬಾಗಿಲ ಬೀಗ ಮುರಿದು ಒಳಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.