ರಟ್ಟಿಹಳ್ಳಿ ಪಟ್ಟಣದ ಮಹಾಲಕ್ಷ್ಮೀ ವೃತ್ತದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ Massive protest ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿದರು.  
ಹಾವೇರಿ

ಬಿಜೆಪಿಯಿಂದ ಬೃಹತ್ ಪ್ರತಿಭಟನೆ Massive protest

ವಿವೇಕಾನಂದ ದಾಸನಕೊಪ್ಪ
ಖರೀದಿಗೆ ನೋಂದಣಿ: ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಈಗಾಗಲೇ ಮೆಕ್ಕೆಜೋಳ ಖರೀದಿಗೆ ನೋಂದಣಿ ಶುರುವಾಗಿದ್ದು, ಡಿ.8ರಿಂದ ಖರೀದಿ ಕೇಂದ್ರ ಆರಂಭಿಸಲಾಗುವುದು. ರಟ್ಟಿಹಳ್ಳಿ ಮತ್ತು ಮಾಸೂರು ಆಸ್ಪತ್ರೆ ಕೆಳದರ್ಜೆಗಿಳಿಸುವ ಆದೇಶ ಹಿಂಪಡೆಯವಂತೆ ಸರ್ಕಾರಕ್ಕೆ ಮಾಹಿತಿ ಕಳುಹಿಸಲಾಗಿದೆ. ರೈತರಿಗೆ ಹಂತ ಹಂತವಾಗಿ ಬೆಳೆ ಹಾನಿ ಪರಿಹಾರ ಜಮೆ ಮಾಡಲಾಗುವುದು. ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆಸಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದರು.
ಅಕ್ರಮ ತಡೆಗೆ ತಂಡ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, ಅಕ್ರಮ ಜೂಜಾಟ, ಮಟ್ಖಾ ದಂಧೆ ನಡೆಸುತ್ತಿರುವವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗುತ್ತಿದೆ. ಅಕ್ರಮಗಳ ಕಡಿವಾಣಕ್ಕೆ ಒಂದು ಪ್ರತ್ಯೇಕ ತಂಡ ರಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.