ರಾಣೆಬೆನ್ನೂರು: ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ವಾಹನ ಮಾಲೀಕನಿಗೆ ಒಂದು ದಿನದ ಸಾದಾ ಜೈಲು ಶಿಕ್ಷೆ ಹಾಗೂ 31 ಸಾವಿರ ರೂ. ದಂಡ ವಿಧಿಸಿ ಇಲ್ಲಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಆದಿತ್ಯಕುಮಾರ ಎಚ್.ಆರ್. ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.
ನಗರದ ಬೋಜರಾಜ ಲೋಕಪ್ಪ ವಡತೇರ (54) ಎಂಬುವರಿಗೆ ಶಿಕ್ಷೆಯಾಗಿರುವುದು.
ನಗರದ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಲಾಗಿತ್ತು. ಬಾಲಕನು ಅತಿವೇಗ ಹಾಗೂ ನಿರ್ಲಕ್ಷ$್ಯದಿಂದ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ಸಂಚಾರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪ್ರಾಪ್ತನಿಗೆ ವಾಹನ ನೀಡಿದ ಅಪರಾಧಿಗೆ ಒಂದು ದಿನದ ಸಾದಾ ಶಿಕ್ಷೆ ಮತ್ತು 31 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಪ್ರಶಾಂತ ಯಲಿಗಾರ ವಾದ ಮಂಡಿಸಿದ್ದರು.