ಬಂಕಾಪುರ: ಬಸ್ ನಿಲ್ದಾಣದಲ್ಲಿ ಕುಳಿತ್ತಿದ್ದ ವ್ಯಕ್ತಿ ಹಿಮ್ಮುಖವಾಗಿ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಿಸನಹಳ್ಳಿಯಲ್ಲಿ ನಡೆದಿದೆ.
ನಾಗರಾಜ ಬಸವಣ್ಣೆಪ್ಪ ವನಹಳ್ಳಿ (45) ಮೃತ ವ್ಯಕ್ತಿ.
ಈತ ಬಸ್ ನಿಲ್ದಾಣದಲ್ಲಿ ಕುಳಿತ್ತಿದ್ದಾಗ ಆಕಸ್ಮಿಕವಾಗಿ ಹಿಮ್ಮುಖವಾಗಿ ಬಿದ್ದಿದ್ದಾನೆ. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.