ವಿಶೇಷ ಪೂಜೆ 
ಹಾವೇರಿ

ನರೇಂದ್ರ ಮೋದಿಯವರ 12 ವರ್ಷಗಳ ಆಡಳಿತ ಸಾಧನೆಗೆ ವಿಶೇಷ ಪೂಜೆ

ರಾಣೆಬೆನ್ನೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಿಂದ ದೇಶವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಜಿಲ್ಲಾ ಟಕದ ಕಾರ್ಯಕರ್ತರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮ ಆಚರಿಸಿದರು.

ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಅಭಿವೃದ್ಧಿಯತ್ತ ಸಾಗುತ್ತಿದ್ದು, ವಿವಿಧ ಜನಪರ ಯೋಜನೆಗಳ ಮೂಲಕ ಭಾರತವು ವಿಶ್ವ ಮಟ್ಟದಲ್ಲಿ ತನ್ನದೇಯಾದ ಸ್ಥಾನವನ್ನು ಗಳಿಸಿದೆ ಎಂದರು.

ವಿಧಾನ ಪರಿಷತ್ ಸದಸ್ಯ ವಿ.ಎಸ್. ಸಂಕನೂರು ಮಾತನಾಡಿ, ಕಳೆದ 12 ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಯೋಜನೆಗಳು ದೇಶದ ಪ್ರಗತಿಗೆ ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ಶಿವರಾಜ ಸಜ್ಜನರ, ವಿಭಾಗ ಪ್ರಭಾರಿ ಭೋಜರಾಜ ಕರೂದಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಮಂಜುನಾಥ ಕಾಟಿ, ಡಾ. ಬಸವರಾಜ ಕೇಲಗಾರ, ಶಿವಾನಂದ ಮ್ಯಾಗೇರಿ ಮತ್ತಿತರರು ಉಪಸ್ಥಿತರಿದ್ದರು.