Crime 
ಹಾವೇರಿ

ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

ಶಿಗ್ಗಾಂವ: ರಸ್ತೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಪಂಚಯ್ಯ ಫಕ್ಕೀರಯ್ಯ ಹಸನಾಬಾದಿಮಠ (53) ಮೃತ ಬೈಕ್ ಸವಾರ.

ಈತ ಬೈಕ್ ಮೇಲೆ ರಾಮನಕೊಪ್ಪದಿಂದ ತಿಮ್ಮಾಪುರಕ್ಕೆ ತೆರಳುತ್ತಿದ್ದ ಸಮಯದಲ್ಲಿ ರಸ್ತೆ ಮಧ್ಯೆ ಡಿವೈಡರ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.