ಸಿದ್ದರಾಮಯ್ಯ 
ಹಾವೇರಿ

ಸಿಎಂ ಸಿದ್ದರಾಮಯ್ಯ ರಾಣೆಬೆನ್ನೂರ ಪ್ರವಾಸ; ಇಲ್ಲಿದೆ ಮಾಹಿತಿ

ರಾಣೆಬೆನ್ನೂರ: ಮುಖ್ಯಮಂತ್ರಿ ಸಿದ್ದರಾಮಯ್ಯ ಏ. 19ರಂದು ನಗರಕ್ಕೆ ಆಗಮಿಸಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಮಧ್ಯಾಹ್ನ 12ಕ್ಕೆ ನಗರ ತಾಲೂಕು ಕ್ರೀಡಾಂಗಣದಲ್ಲಿ ನಿಮಿರ್ಸಿದ ಹೆಲಿಪ್ಯಾಡ್ಗೆ ಬಂದು ನಗರದ ದೊಡ್ಡಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ತಾಲೂಕಿನ ನಿಟ್ಟೂರ ಗ್ರಾಮದ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ 50ನೇ ವರ್ಷದ ಸುವರ್ಣ ಮಹೋತ್ಸವ, ಕನಕದಾಸರ ಮಹಾದ್ವಾರ ಉದ್ಘಾಟನೆ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4 ಗಂಟೆಗೆ ಮರಳಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.