ಬ್ಯಾಡಗಿ: ಜಮೀನಿನಲ್ಲಿ ಹಾವು ಕಚ್ಚಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಳಗೊಂಡ ಗ್ರಾಮದಲ್ಲಿ ನಡೆದಿದೆ.
ಶಂಕ್ರಪ್ಪ ಒಲೇಕಾರ (41) ಮೃತ ವ್ಯಕ್ತಿ.
ಇವರು ಜಮೀನಿನಲ್ಲಿ ಮೆಕ್ಕೆಜೋಳದ ತೆನೆ ಮುರಿಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.