Crime 
ಹಾವೇರಿ

ಯಾವುದೋ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಶಿಗ್ಗಾಂವಿ: ಯಾವುದೋ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಅಡವಿ ಸೋಮಾಪುರ ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿ ರಾಮನಗರ ನಿವಾಸಿ ಕ್ರಿಸ್ತರಾಜ ಡೆವಿಡ್ ಪ್ರಾನ್ಸಿಸ್ ಮೃತ ಬೈಕ್ ಸವಾರ.

ಈತ ದುಂಡಸಿ ಕಡೆಯಿಂದ ತಡಸ ಕಡೆಗೆ ಬರುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಗೆ ಬಿದ್ದ ಕ್ರಿಸ್ತರಾಜ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.