ರಾಣೆಬೆನ್ನೂರು: ಹೊಟ್ಟೆ ನೋವು ತಾಳಲಾರದೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಚಿದಂಬರ ನಗರದಲ್ಲಿ ನಡೆದಿದೆ.
ಸುಮಾ ಶಿವಪ್ಪ ಉಂಕಿ (50) ಮೃತ ಮಹಿಳೆ.
ಇವರು ಹೊಟ್ಟೆನೋವು ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.