Crime 
ಹಾವೇರಿ

ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸಾವು

ಶಿಗ್ಗಾಂವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ತಾಲೂಕಿನ ಮಡ್ಲಿ ಕ್ರಾಸ್ ಬಳಿ ನಡೆದಿದೆ.

ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಶಿವಪ್ಪ ಬಸಪ್ಪ ಬಾರಕೇರ (51) ಮೃತ ವ್ಯಕ್ತಿ. ಬೈಕ್ ಓಡಿಸುತ್ತಿದ್ದ ಮಂಜುನಾಥ ಎಂಬುವನಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.

ಇವರು ಬೈಕ್ ಮೇಲೆ ಹಿರೇಮಣಕಟ್ಟಿ ಕಡೆಯಿಂದ ಮಡ್ಲಿ ಕ್ರಾಸ್ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಬೈಕ್ ಹೋಗಿ ಟ್ರ್ಯಾಕ್ಟರ್ ನ ಹಿಂಬದಿ ಚಕ್ರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶಿವಪ್ಪ ಮೃತಪಟ್ಟಿದ್ದಾನೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.