ಬ್ಯಾಡಗಿ: ಸಾಲಬಾಧೆಯಿಂದ ಯುವ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದುಮ್ಮಿಹಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ವಿಕಾಸ ಬಸವರಾಜ ಹರಪನಹಳ್ಳಿ (19) ಮೃತ ರೈತ.
ಈತನ ಹೆಸರಿನಲ್ಲಿ 1.16 ಎಕರೆ ಜಮೀನು ಇದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ. ಇದರಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.