ಜಿಲ್ಲೆ

ಶಂಕರನಾರಾಯಣ ಭಟ್‌ಗೆ ಹವ್ಯಕ ಶಿಕ್ಷಕರತ್ನ ಪ್ರಶಸ್ತಿ

ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ತೆಕ್ಕೆಕೆರೆ ಶಂಕರನಾರಾಯಣ ಭಟ್ ಅವರು ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ನೀಡಲಾಗುವ ಹವ್ಯಕ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಎಸ್.ಎನ್.ಭಟ್ ಅವರಿಗೆ ಪ್ರಶಸ್ತಿ ಪ್ರದಾನ ವಾಡಲಾಯಿತು.