ಜಿಲ್ಲೆ

ಶಿರಂಗಾಲದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಸುನಿಲ್ ಪೊನ್ನೇಟಿ

ಕುಶಾಲನಗರ:

ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೋಮವಾರ ಭೇಟಿ ನೀಡಿ ಆರೋಗ್ಯದ ಬಗ್ಗೆ ಇಲಾಖೆಯ ಸೂಚನೆಯಂತೆ ಸಂಪೂರ್ಣವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ, ಶಾಲಾ ಶಿಕ್ಷಕರಿಗೆ ನೀಡಿದರು.

ಮುಂಜಾಗ್ರತಾ ಕ್ರಮವಾಗಿ ಶಾಲಾ ಆವರಣದಲ್ಲಿ ಲಾರ್ವಾ ಸಮೀಕ್ಷೆ ಮಾಡಲಾಯಿತು. ಹಿರಿಯ ಆರೋಗ್ಯ ನಿರೀಕ್ಷ ವಿಶ್ವಜ್ಞಾ ಡೆಂಘಿ ರೋಗದ ಬಗ್ಗೆ ಹಾಗೂ ಕೋವಿಡ್ - 19 ಕಾಯಿಲೆ ಬಗ್ಗೆ, ಈಡಿಸ್ ಲಾರ್ವಾ ಮುಕ್ತ ಶಾಲಾ ಆವರಣ ವನ್ನಾಗಿ ಮಾಡಲು ಮಾಹಿತಿ ನೀಡಿದರು.

ಈ ಸಂದರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಸೌರಭ್, ಬಿಂದು, ಶಾಲಾ ಮುಖ್ಯೋಪಾಧ್ಯಾರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.