ಕುಶಾಲನಗರ:
ಆರೋಗ್ಯ ಇಲಾಖೆ ವತಿಯಿಂದ ಬೈಚನಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಮನೆ ಮನೆಗೆ ಭೇಟಿ ನೀಡಿ ಆರ್ ಆರ್ ಟಿ ಲಾರ್ವಾ ಸಮೀಕ್ಷಾ ತಂಡಗಳು ಲಾರ್ವಾ ಸಮೀಕ್ಷೆ ನಡೆಸಿ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳಾದ ಡೆಂಘೀ. ಚಿಕೂನ್ ಗುನ್ಯಾ, ಮಲೇರಿಯಾ ಕುರಿತು ಕರಪತ್ರಗಳನ್ನು ಹಂಚುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ಮಳೆಗಾಲದ ಮುಂಜಾಗ್ರತೆ ಕುರಿತು ಹಾಗೂ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಆರೋಗ್ಯ ಶಿಕ್ಷಣವನ್ನೂ ನೀಡಲಾಯಿತು.
ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಭೇಟಿ ನೀಡಿ ಪರಿಶೀಲಿಸಿ ಮೇಲ್ವಿಚಾರಣೆ ನಡೆಸಿದರು. ಆರ್‌ಆರ್‌ಟಿ ಲಾರ್ವಾ ಸರ್ವೇಕ್ಷಣೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಸುರಕ್ಷತಾ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.