ಹುಬ್ಬಳ್ಳಿ: ಇಲ್ಲಿಯ ಹೆಗ್ಗೇರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಅಭ್ಯುದಯ ವಿದ್ಯಾರ್ಥಿ ಸಂಘದ ವತಿಯಿಂದ ಪ್ರಸೂತಿ ತಂತ್ರ ಮತ್ತು ಸ್ತ್ರಿರೋಗ ವಿಭಾಗದಲ್ಲಿ ವಿಶ್ವ ಜನಸಂಖ್ಯಾ ದಿನ ಅಂಗವಾಗಿ ಮಹಿಳೆಯರಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಸಲಹಾ ಶಿಬಿರವನ್ನು ಜುಲೈ 11ರಂದು ಬೆಳಗ್ಗೆ 9ಕ್ಕೆ ಏರ್ಪಡಿಸಲಾಗಿದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಸೂತಿ ತಂತ್ರ ಮತ್ತು ಸ್ತ್ರಿರೋಗ ವಿಭಾಗದ ಮುಖ್ಯಸ್ಥೆ ಡಾ. ಅನಿತಾ ಹಲಗತ್ತಿ ಹಾಗೂ ಪ್ರಾಂಶುಪಾಲ ಡಾ. ಎ.ಎಸ್. ಪ್ರಶಾಂತ ಪ್ರಕಟಣೆಯಲ್ಲಿ ಕೋರಿದ್ದಾರೆ.