ಶನಿವಾರಸಂತೆ: ಜಿಲ್ಲೆಯಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞರ ಕೊರತೆ ಇದ್ದರೂ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಪ್ರಾಮಾಣಿಕ ಸೇವೆಯಿಂದ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ದೊರಕುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಜನ್ ಡಾ.ನಂಜುಂಡಯ್ಯ ಹೇಳಿದರು.
ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆಸ್ಪತ್ರೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,
ಬೋಧಕ ಆಸ್ಪತ್ರೆ ಹಾಗೂ ಆಯುಷ್ಮಾನ್ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಹಳ್ಳಿಗಾಡಿನ ಜನರ ಆರೋಗ್ಯ ಪಾಲನೆ ನಿಟ್ಟಿನಲ್ಲಿ ಸರ್ಕಾರ ಮತ್ತು ಆರೋಗ್ಯ ಇಲಾಖೆ ಕಳೆದ 18 ತಿಂಗಳಿಂದ ಪ್ರತಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ವಿವಿಧ ಕಾಯಿಲೆಗಳಿಗೆ ಸಂಬಂಧ ಪಟ್ಟ ತಜ್ಞರಿಂದ ತಪಾಸಣೆ ನಡೆಸಲಾಗುತ್ತಿದೆ. ರೋಗಿಗಳು ದೂರದ ಆಸ್ಪತ್ರೆಗಳಿಗೆ ಹೋಗುವುದು ಇದರಿಂದ ತಪ್ಪಿದೆ ಎಂದರು.
ಸಾಹಿತಿ ಶ.ಗ.ನಯನತಾರಾ ಶಿಬಿರ ಉದ್ಘಾಟಿಸಿ ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯಸದೃಢ ವಾಗಲು ಸರ್ಕಾರಿ ಆಸ್ಪತ್ರೆಗಳಲ್ಲಿ ತಪಾಸಣಾ ಶಿಬಿರಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು. ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ನೀಗಿಸಲು ಇಲಾಖೆ ಕ್ರಮ ವಹಿಸಬೇಕು ಎಂದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶೋಕ್, ದಂತ ವೈದ್ಯ ಡಾ.ನಿತಿನ್, ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್ ಇದ್ದರು. ತಜ್ಞ ವೈದ್ಯರಾದ ಡಾ.ರಾಜಶ್ರೀ, ಡಾ.ಅಜೀರ್, ಡಾ.ಸಚಿನ್, ಡಾ.ಸಿದ್ದಿಕ್, ಡಾ.ಶ್ವೇತಾ, ಡಾ.ರಮೇಶ್, ಡಾ.ಸಿದ್ದನ್, ಡಾ.ಅಕಾಂಕ್ಷಾ, ಡಾ.ಸಂಜನಾ, ಆರ್.ವಿಕ್ರಮ್, ದಿವ್ಯಶ್ರೀ ತಪಾಸಣೆ ನಡೆಸಿದರು.